ಕುಮಟಾ : ಸಂಭ್ರಮದ ಗಣೇಶ ಚತುರ್ಥಿಗೆ ಸಿದ್ಧತೆ ನಡೆಯುತ್ತಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಯ ಕಾಲಕ್ಕೆ ವೈನ್ ಶಾಪ್ ಮತ್ತು ಬಾರ್ ಗಳಲ್ಲಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳ ಕಚೇರಿ ಆದೇಶ ಹೊರಡಿಸಿದೆ. ತಾಲೂಕಿನಲ್ಲಿ ಮೆರವಣಿಗೆ ಮೂಲಕ ಗಣೇಶ ವಿಗ್ರಹವನ್ನು ವಿಸರ್ಜನೆ ಮಾಡುವುದಿದ್ದು, ಆ ಸಮಯದಲ್ಲಿ ವಿಸರ್ಜನಾ ಮೆರವಣಿಗೆಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇರುತ್ತದೆ. ಈ ಕಾರಣದಿಂದಾಗಿ ಅಗತ್ಯ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. 

ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ. 23, 25, 28ರ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 12:00 ವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.