ಕುಮಟಾ : ಪಟ್ಟಣದ ಮಣಕಿ ಮೈದಾನದಲ್ಲಿ ಸೋಮವಾರ ನಡೆದ ಪ್ರೌಢಶಾಲಾ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದ ಗುಂಪು ವಿಭಾಗದ ಥ್ರೋ ಬಾಲ್ ನಲ್ಲಿ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಬಾಲಕರು ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಂಸ್ಥೆಗೆ, ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅರುಣ ನಾಯ್ಕ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಗೈದಿದ್ದು ಅವರ ಸಾಧನೆಗೆ ವಿದ್ಯಾನಿಕೇತನ ಮೂರೂರು ಕಲ್ಲಬ್ಬೆ ಸಂಸ್ಥೆಯ ಕಾರ್ಯಧ್ಯಕ್ಷರಾದ ಆರ್. ಜಿ. ಭಟ್ಟ ಹಾಗೂ ಸರ್ವ ಸದಸ್ಯರು, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಕಾರವಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಕುಮಟಾ, ದೈಹಿಕ ಪರಿವೀಕ್ಷಕರು ಕುಮಟಾ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.