ಕಾರವಾರ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಘಟ್ಟದಲ್ಲಿ ಬಸ್ ಓವರ್‌ಟೇಕ್ ಮಾಡಲು ಹೋಗಿ ಬಸ್ ಕೆಳಗೆ ಬಿದ್ದು ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಅಂಕೋಲಾ ತಾಲೂಕಿನ ಶಿರಗುಂಜಿ ಗ್ರಾಮದ ನಿವಾಸಿ ಜೀತೇಂದ್ರ ಗೌಡ ಎಂದು ಗುರುತಿಸಲಾಗಿದೆ.

RELATED ARTICLES  ಯಶಸ್ವಿಯಾಗಿ ಸಂಪನ್ನವಾದ "ಭೀಷ್ಮ ವಿಜಯ" ತಾಳಮದ್ದಳೆ.

ಈತ ಅಂಕೋಲಾದಿಂದ ಕಾರವಾರಕ್ಕೆ ಬರುತ್ತಿದ್ದ
ವೇಳೆ ರಸ್ತೆ ತಿರುವಿನಲ್ಲಿ ಬಸ್ ಓವರ್‌ಟೇಕ್ ಮಾಡಲು ಹೋಗಿದ್ದ ಎನ್ನಲಾಗಿದ್ದು ಈ ಸಮಯದಲ್ಲಿ ಎದುರಾದ ಕಂಟೇನರ್‌ ಲಾರಿಗೆ ಡಿಕ್ಕಿಯಾಗುವುದನ್ನ ತಪ್ಪಿಸಲು ಹೋಗಿ ಬಸ್ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

RELATED ARTICLES  ಅಭಿನವ ಜಾತವೇದಮುನಿ ಶಿವಾಚಾರ್ಯ ಸ್ವಾಮೀಜಿಯವರಿಗೆ ಗೌರವ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧದ ಕುರಿತು ಕಾರವಾರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.