ಮುಂಡಗೋಡ : ತಾಲೂಕಿನ ಮಳಗಿ ಧರ್ಮಾ ಜಲಾಶಯ ಕ್ರಾಸ್ ಹತ್ತಿರ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಳಿ 2.28 ಕೆಜಿ ಗಾಂಜಾ ಪತ್ತೆಯಾಗಿದ್ದು, ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಸುಮಾರು 80000 ರೂ. ಮೌಲ್ಯದ ಗಾಂಜಾ ಮಾರುತ್ತಿದ್ದ ಎನ್ನಲಾಗಿದೆ. ಸಲ್ಮಾನಖಾನ ಆಲೂರ, (24) ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿರವಳ್ಳಿ ಗ್ರಾಮದವನು ಎಂದು ಗುರುತಿಸಲಾಗಿದೆ.

RELATED ARTICLES  ಕೈಗಾದಲ್ಲಿ ಸ್ಥಾಪನೆಯಾಗಲಿದ ಮತ್ತೆರಡು ಉಷ್ಣ ವಿದ್ಯುತ್ ಘಟಕ.

ಯಾವುದೇ ಪರವಾನಿಗೆ ಇಲ್ಲದೆ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಎಸ್.ಪಿ ವಿಷ್ಣುವರ್ಧನ್, ಹೆಚ್ಚುವರಿ ಎಸ್.ಪಿ ಎಸ್ ವಿಜಯಕುಮಾರ, ಸಿರಶಿ ಡಿವೈಎಸ್ಪಿ ಗಣೇಶ
ಕೆ.ಎಲ್ ಅವರ ಮಾರ್ಗದರ್ಶನದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ ಆರೋಪಿಯನ್ನು ಬಂಧಿಸುವಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಠಾಣಾಧಿಕಾರಿ ಬಿ.ಎಸ್
ಲೋಕಾಪುರ, ಪಿಎಸ್‌ಐ ಯಲ್ಲಾಲಿಂಗ ಕುನ್ನೂರ, ಹನಮಂತ ಕುಡಗುಂಟಿ ಹಾಗೂ ಸಿಬ್ಬಂದಿಗಳಾದ ಗಣಪತಿ ಹುನ್ನಳ್ಳಿ, ಕೊಟೇಶ ನಾಗರವಳ್ಳಿ,ಅಣ್ಣಪ್ಪ ಬುಡಿಗೇರ, ಬಸವರಾಜ ಲಮಾಣಿ, ಸಂಜು ರಾಠೋಡ ಹಾಗೂ ಗುರುರಾಜ ಬಿ ಅವರು
ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES  ಉತ್ತರ ಕನ್ನಡದಲ್ಲಿ ಕೊರೋನಾ ಆರ್ಭಟ : ಈವರೆಗಿನ ಅತಿಹೆಚ್ಚು ಪ್ರಕರಣ ದಾಖಲು.