ಹೊನ್ನಾವರ : ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕರ್ಕಿ ಶ್ರೀಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿನಿ ಹರ್ಷಿತಾ ಗೌಡ ಗುಂಡು ಎಸೆತ ಮತ್ತು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

RELATED ARTICLES  ಅಪ್ರತಿಮ ಸಾಧನೆ ತೋರಿದ ಕುಮಟಾದ ಗಿಬ್ ಆಂಗ್ಲಮಾಧ್ಯಮ

ಇವಳು ಬಹುಮುಖ ಪ್ರತಿಭೆಯ ವಿದ್ಯಾರ್ಥಿನಿಯಾಗಿದ್ದು, ಈಗಾಗಲೇ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಜಿಲ್ಲಾ ಅತ್ಯುತ್ತಮ ನಾಯಕ ನಟಿ ಪ್ರಶಸ್ತಿ ಪಡೆದಿರುವುದು ವಿಶೇಷ. ಕಲಿಕೆಯಲ್ಲೂ, ಕ್ರೀಡೆಯಲ್ಲೂ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಮುಂದಿರುವ ಹರ್ಷಿತಾ ಗೌಡಳ ಸಾಧನೆಗೆ ಮತ್ತು ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ ನಾಯ್ಕರವರಿಗೆ ಉಪನಿರ್ದೇಶಕರಾದ ಲತಾ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ, ಆಡಳಿತ ಮಂಡಳಿಯ ಅಧ್ಯಕ್ಷರಾದ ಗಜಾನನ ಹೆಗಡೆ, ಮುಖ್ಯಾಧ್ಯಾಪಕ ಎಲ್.ಎಮ್.ಹೆಗಡೆ, ಊರ ನಾಗರಿಕರು, ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

RELATED ARTICLES  ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ಮಾರಿಜಾತ್ರಾ ಮಹೋತ್ಸವ ಪ್ರಾರಂಭ.