ಕುಮಟಾ : ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟವು ಶ್ರೀ ಶಿವಾಜಿ ಸರಕಾರಿ ಪದವಿ ಪೂರ್ವ ಕಾಲೇಜುಹಳಿಯಾಳದಲ್ಲಿ ಇತ್ತೀಚಿಗೆ ನಡೆದಿದ್ದು, ಇದರಲ್ಲಿ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜು ಗೋರೆಯ ಒಟ್ಟು ೧೭ ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಜೊತೆಗೆ, ಬಾಲಕರ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಚಿನ್ಮಯ ವಿಷ್ಣು ಭಟ್ಟ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ.

RELATED ARTICLES  ಘಂಟೆಯ ನಾದ ಇದ್ದಲ್ಲಿ ಮಸೀದಿಯ ಆಜಾನ್ ಮೊಗಳಬಾರದು ; ಶಿವಾನಂದ ಬಡಿಗೇರ

ಬಾಲಕರ ವಿಭಾಗದ ರಿದಮಿಕ್ ಯೋಗ ಸ್ಪರ್ಧೆಯಲ್ಲಿ ಶಶಾಂಕ ಎಸ್ ಗೌಡ ದ್ವಿತೀಯ ಸ್ಥಾನ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಮೇಧಿನಿ ಕಿರಣ ಭಟ್ಟ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ೪x೧೦೦ ಮೀ. ರಿಲೇ ಆಟದಲ್ಲಿ ನಯನಾ ಭಟ್ಟ ಮತ್ತು ತಂಡ ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಜಿ ಜಿ ಹೆಗಡೆ, ಪ್ರಾಚಾರ್ಯ ಡಿ. ಎನ್ ಭಟ್ಟ, ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES  ರಾಷ್ಟ್ರೀಯ ಸಾಧಕರ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ರಾಜು ನಾಯ್ಕ