ಕುಮಟಾ : ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ಟ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು. ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾ ಸೇವೆಯನ್ನು ಇವರು ಗೈದಿದ್ದರು.

RELATED ARTICLES  ದಾಂಡೇಲಿ- ಹೊನ್ನಾವರ ಬಸ್ ಅಪಘಾತ: ಹಲವರಿಗೆ ಗಾಯ

ದಾಕ್ಷಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮೊದಲಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದವರು ಇವರು. ತಮ್ಮ ಭಾವ ಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಇವರು ಭಾಜನರಾಗಿದ್ದರು.

RELATED ARTICLES  ಆತ್ಮಲಿಂಗ ಪೂಜೆ ನೆರವೇರಿಸಿದ ಪ ಪೂ ಶ್ರೀ ಶ್ರೀ ಪರಮಾನಂದ ಸ್ವಾಮಿಗಳು