Satwadhara News

ಇಬ್ಬರ ಸಾವಿಗೆ ಕಾರಣವಾದ ಭೀಕರ ಅಪಘಾತದ Live ವಿಡಿಯೋ

ಯಲ್ಲಾಪುರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಾಳುವನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಮೃತರನ್ನು ಮೃತರನ್ನು ತಾಲೂಕಿನ ಹುಣಸೆಕೊಪ್ಪದ ರಾಜು (16) ಮತ್ತು ರಾಮನಕೊಪ್ಪದ ದರ್ಶನ (16) ಎಂದು ಗುರುತಿಸಲಾಗಿದೆ. ಜಬೀರ್ (18) ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಡಿಯೋ ಇಲ್ಲಿದೆ.

ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಕಾರ್ ತಿರುಗಿದಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಂತಿದ್ದ ಮತ್ತೊಂದು ಕಾರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.