ಕಾರವಾರ : ಗಾಂಜಾ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದಾಶಿವಗಡ ನಿವಾಸಿ ಪ್ರಶಾಂತ ನಾಯರ್‌ ಬಂಧಿತ ಆರೋಪಿ.

ಈತನ ಮೇಲೆ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಪ್ರಕರಣ ದಾಖಲಾಗಿತ್ತು. ಸದರಿ ಪ್ರಕರಣದಲ್ಲಿ ಬಂಧನದ ವಾರೆಂಟ್ ಕೂಡ ಜಾರಿಯಾಗಿತ್ತು. ಈತ ನ್ಯಾಯಾಲಯಕ್ಕೆ ಹಾಜರಾಗದೇ ಪೊಲೀಸರಿಗೂ ಸಿಗದೇ ತಪ್ಪಿಸಿಕೊಂಡು ಓಡಾಡಿಕೊಂಡಿದ್ದ ಎನ್ನಲಾಗಿದೆ.

RELATED ARTICLES  ಕುಕ್ಕರ್ ಸಿಡಿದು ಶಾಲಾ ಬಿಸಿಯೂಟದ ಸಿಬ್ಬಂದಿಗೆ ಪೆಟ್ಟು.

ಆರೋಪಿಯನ್ನು ಸದಾಶಿವಗಡದ ರಾಜಕೇನಿಭಾಗದಲ್ಲಿ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ನಿರ್ದೇಶನದಂತೆ ನಗರ ಠಾಣೆ ಪೊಲೀಸ್ ನಿರೀಕ್ಷಕ ರಮೇಶ್ ಹೂಗಾರ್ ಮಾರ್ಗದರ್ಶನದಲ್ಲಿ ಪಿಎಸ್‌ಐ ವಿಶ್ವನಾಥ ನಿಂಗೊಳ್ಳಿ ನೇತೃತ್ವದ ಸೂರಜ್ ಕೊಠಾರಕರ್, ರಾಜೇಶ್ ನಾಯಕ್, ಗಿರೀಶಯ್ಯ, ವಿಕಾಸ್ ನಾಂದ್ರೆ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES  ಮಹಾತ್ಮಾ ಗಾಂಧಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ದಿ. 8 ಕ್ಕೆ