ಹೊನ್ನಾವರ : ಕಾರು ಹಾಗೂ‌ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ, ರಸ್ತೆ ಮೇಲೆ ಬಿದ್ದ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದು ಹೋದ ಪರಿಣಾಮ ಬೈಕ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಕಾಸರಕೋಡಿನ ರೋಷನ್ ಮೊಹಲ್ಲಾ ಮಸೀದಿ ಸಮೀಪ ನಡೆದಿದೆ.

ಮೃತ ಬೈಕ್ ಸವಾರನನ್ನು ಕೆಳಗಿನೂರು ಅಪ್ಸರಕೊಂಡ ನಿವಾಸಿ ಲಂಬೋದರ ಲಕ್ಷ್ಮಯ್ಯ ಗೌಡ ಎಂದು ಗುರುತಿಸಲಾಗಿದೆ. ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿಗೆ ಬಂದ ಕಾರಿಗೆ ಡಿಕ್ಕಿಯಾಗಿದೆ. ಬೈಕ್‌ ಸವಾರ ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾನೆ‌.

RELATED ARTICLES  ಏಕಾಗ್ರತೆ ಹೆಚ್ಚಲು ಹೀಗೆ ಮಾಡಿ.

ಇದೇ ವೇಳೆ ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ಬರುತ್ತಿದ್ದ ಲಾರಿಯೊಂದು ಬೈಕ್ ಸವಾರನ ಮೇಲೆ ಹತ್ತಿದೆ. ಸವಾರನ ಎಡಗಾಲಿನ ಮೇಲೆ ಲಾರಿ ಹರಿದ ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದ. ಅಪಘಾತ ಪಡಿಸಿದ ಕಾರು ಹಾಗೂ ಲಾರಿ ಚಾಲಕರು ಸ್ಥಳದಲ್ಲಿ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾರೆ.

RELATED ARTICLES  ವಿದ್ಯಾರ್ಥಿಗಳ ಸುರಕ್ಷತೆಯೇ ನಮಗೆ ಪ್ರಥಮಾದ್ಯತೆಯಾಯಿತು : ಕೊಂಕಣ ಸಂಸ್ಥೆಯಿಂದ ಪ್ರಕಟಣೆ.

ಬೈಕ್ ಸವಾರನನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಾರಿ ಹರಿದು ಕಾಲಿಗೆ ಬಲವಾದ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮಂಗಳವಾರ ಸಂಜೆ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಾಗಿದೆ.