ಕಾರವಾರ : ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ 766(E) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನಲೆಯಲ್ಲಿ ನವೆಂಬರ್ 1 ರಿಂದ ಮೇ 31ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಶಿರಸಿಯ ಸಹಾಯಕ ಆಯುಕ್ತ ಆರ್.ದೇವರಾಜ ಹೇಳಿದರು.

ಇಂದು ಮಾಧ್ಯಮಗಳೊಂದಿಗೆ ಶಿರಸಿ ಯಲ್ಲಿ ಮಾತನಾಡಿದ ಅವರು ಹೆದ್ದಾರಿ ಅಗಲೀಕರಣಕ್ಕೆ ಆರ್.ಎನ್.ಎಸ್.ಕಂಪನಿಗೆ ಗುತ್ತಿಗೆ ನೀಡಲಾಗಿದೆ. 2020 ರಲ್ಲೇ ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನ ನಿರ್ಬಂಧಕ್ಕೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದರು.ಇದೀಗ ಹೆದ್ದಾರಿ ಪ್ರಾಧಿಕಾರವು ಸಹ ಸಂಚಾರ ದಟ್ಟಣೆ ಕಡಿಮೆ ಮಾಡಿ ಕಾಮಗಾರಿ ಮುಗಿಸಲು ವಾಹನ ಸಂಚಾರ ನಿರ್ಬಂಧಿಸುವಂತೆ ಕೋರಿದೆ.ಈಗಾಗಲೇ ಅಗಲೀಕರಣದ 33ಕಿಲೋಮೀಟರ್ ವ್ಯಾಪ್ತಿಯಲ್ಲಿ 26 ಕಿಲೋಮೀಟರ್ ವರೆಗೂ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ವಾಹನಗಳಿಗೆ ನಿರ್ಬಂಧಿಸುತಿದ್ದೇವೆ ಎಂದಿದ್ದಾರೆ.

RELATED ARTICLES  ಇಂದಿನಿಂದ ಉದಯ ಬಜಾರ್ ನಲ್ಲಿ “DEEPAVALI DELIGHTS SALE”

ಇನ್ನು ವಾಹನ ಸವಾರರಿಗೆ ಬದಲಿ ವ್ಯವಸ್ಥೆ ಕಲ್ಪಿಸಿದ್ದು ಕುಮಟಾ-ದೊಡ್ಮನೆ-ಸಿದ್ದಾಪುರ-ಶಿರಸಿ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿದೆ‌. ಹೊನ್ನಾವರ-ಮಾವಿನಗುಂಡಿ, ಸಿದ್ದಾಪುರ, ಶಿರಸಿ ಮಾರ್ಗದಲ್ಲಿ ಎಲ್ಲ ತರದ ವಾಹನಗಳಿಗೆ ಅವಕಾಶ ಮಾಡಿಕೊಟ್ಟಿದ್ದು ಶಿರಸಿ-ಯಾಣ-ವಡ್ಡಿ-ಕುಮಟಾ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ,ಶಿರಸಿ ಯಿಂದ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಮಾರ್ಗದಲ್ಲಿ ಎಲ್ಲ ತರದ ಭಾರಿ ವಾಹನಗಳ ಸಹಿತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ .ಆದ್ರೆ ಘಟ್ಟ ಭಾಗದ ಯಾಣ ಮತ್ತು ದೊಡ್ಮನೆ ಮಾರ್ಗದಲ್ಲಿ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಿದೆ ಎಂದು ಶಿರಸಿಯ ಸಹಾಯಕ ಆಯುಕ್ತ ಆರ್.ದೇವರಾಜ್ ಮಾಹಿತಿ ನೀಡಿದರು.

RELATED ARTICLES  ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಶ್ರೇಯಾ ಉತ್ತಮ ಸಾಧನೆ

1ಕುಮಟಾ ಮಾರ್ಗದಿಂದ ದೊಡ್ಮನೆ ಘಟ್ಟ ಭಾಗದಿಂದ ಸಿದ್ದಾಪುರ ಮಾರ್ಗವಾಗಿ ಶಿರಸಿ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಅವಕಾಶ.

ಹೊನ್ನಾವರ ಮೂಲಕ ಮಾವಿನಗುಂಡಿ ಘಟ್ಟ ಭಾಗದಿಂದ ಸಿದ್ದಾಪುರ ಮಾರ್ಗವಾಗಿ ಶಿರಸಿ ಮಾರ್ಗದಲ್ಲಿ ಎಲ್ಲಾ ತರದ ವಾಹನಗಳಿಗೆ ಅವಕಾಶ.

ಶಿರಸಿ ಮಾರ್ಗವಾಗಿ ಯಾಣ ದಿಂದ ವಡ್ಡಿ ಮಾರ್ಗವಾಗಿ ಕುಮಟಾ ಕ್ಕೆ ಸೇರುವ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಮಾತ್ರ ಅವಕಾಶ.

ಶಿರಸಿ ಯಿಂದ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಮಾರ್ಗದಲ್ಲಿ ಎಲ್ಲ ತರದ ವಾಹನಗಳ ಸಂಚಾರಕ್ಕೆ ಅವಕಾಶ.

ಯಾಣ ಮತ್ತು ದೊಡ್ಮನೆ ಮಾರ್ಗದಲ್ಲಿ ಲಘು ವಾಹನಕ್ಕೆ ಮಾತ್ರ ಅವಕಾಶ