ಅಂಕೋಲಾ : ವೇಶ್ಯಾವಾಟಿಕೆ ನಡೆಸುವ ಉದ್ದೇಶದಿಂದ ಬೆಂಗಳೂರು ಮೂಲಕ 26 ವರ್ಷದ ಮಹಿಳೆಯನ್ನು ತಾವು ವಾಸವಾಗಿರುವ ಬಾಡಿಗೆ ಮನೆಗೆ ಕರೆಯಿಸಿಕೊಂಡು ಹೆಚ್ಚಿನ ಹಣದ ಆಸೆ ತೋರಿಸಿ, ಅವಳ ಇಚ್ಚೆಗೆ ವಿರುದ್ಧವಾಗಿ ವೇಶ್ಯಾವಾಟಿಕೆ ದಂಧೆಗೆ ತೊಡಗಿಸಲು ಒಪ್ಪಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿ ಇಬ್ಬರು ಗಿರಾಕಿಗಳನ್ನು ರಕ್ಷಿಸಿದ ಘಟನೆ ವರದಿಯಾಗಿದೆ.

RELATED ARTICLES  ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ತಡೆಗೆ ಸರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ.

ತಾಲೂಕಿನ ಬೇಲೆಕೇರಿಯಲ್ಲಿ ಈ ವೇಶ್ಯಾವಾಟಿಕೆ ನಡೆಯುತ್ತಿತ್ತೆಂಬ ಆರೋಪ ಕೇಳಿಬಂದಿದ್ದು, ಈ ಆರೋಪದಡಿ, ಬಳ್ಳಾರಿ ರಸ್ತೆಯ ಗುರುಬವನ ಆಶ್ರಯ ಕಾಲನಿ ಹಿಂದುಗಡೆಯ ಓರ್ವ ಮಹಿಳೆ ಹಾಗೂ ಮತ್ತು ಹೊನ್ನಾವರ ಮೂಲದ ಅಟೋಚಾಲಕ ನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಇವರು ತಮ್ಮ ಲಾಭಕ್ಕೋಸ್ಕರ ಬೆಲೇಕೇರಿಯ ಬಾಡಿಗೆ ಮನೆಗೆ ಯುವತಿಯನ್ನು ಕರೆಸಿ ಬಲವಂತವಾಗಿ ವೇಶ್ಯಾವಾಟಿಕೆಗೆ ತೊಡಗಿಸುತ್ತಿದ್ದರು ಎನ್ನಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂತೋಷ ಶೆಟ್ಟಿ ರವರ ತಂಡ ದಾಳಿ ನಡೆಸಿ ಪ್ರಕರಣ ಬೇಧಿಸಿದ್ದಾರೆ.

RELATED ARTICLES  ಹಳೆಕೋಟೆ ಹನುಮಂತ ದೇವಸ್ಥಾನದ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ.

ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಮುಂದುವರಿಸಿದ್ದಾರೆ. ಬೆಂಗಳೂರು ಮೂಲದ ಸಂತ್ರಸ್ತ ಯುವತಿಯನ್ನು ರಕ್ಷಿಸಿದ್ದಾರೆ.