ಕುಮಟಾ : ಪ್ರವಾಸಕ್ಕೆಂದು ಬಂದು ಬಾಡದಲ್ಲಿ ಸಮುದ್ರಕ್ಕಿಳಿದಿದ್ದ ಪ್ರವಾಸಿಗ ನೀರಿನಲ್ಲಿ ಮುಳುಗಿ ಸಾವು ಕಂಡಿರುವ ಘಟನೆ ನಡೆದಿದೆ. ದಸರಾ ಹಬ್ಬದ ರಜೆಯ ಮಾಜಾಕ್ಕಾಗಿ ಹೊರ ಜಿಲ್ಲೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದು ಸಮುದ್ರದ ತಡದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿದ ವ್ಯಕ್ತಿ ಸಮುದ್ರದ ಸುಳಿಗೆ ಸಿಕ್ಕಿ ಸಾವು ಕಂಡಿದ್ದಾನೆ.

RELATED ARTICLES  ಗ್ಯಾಸ್ ಟ್ಯಾಂಕರ್ ಪಲ್ಟಿ, ಕೆಲಕಾಲ ಭಯದ ವಾತಾವರಣ.

ಶಿವಮೊಗ್ಗ ಮೂಲದ ಪ್ರಶಾಂತ್ ಗುಪ್ತ ಸಮುದ್ರದಲ್ಲಿ ಮುಳಗಿ ಸಾವು ಕಂಡಿದ್ದು ಶಿವಮೊಗ್ಗ ದಿಂದ 11 ಜನರೊಂದಿಗೆ ಕುಮಟಾ ಕ್ಕೆ ಪ್ರವಾಸ ಬಂದಿದ್ದರು ಎನ್ನಲಾಗಿದೆ. ಈ ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಕಾಡುಹಂದಿ ಬೇಟೆಯಾಡಿದ ಆರೋಪಿ ಅರೆಸ್ಟ್