ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿಯೊಬ್ಬರನ್ನು ಬಂಧಿಸಲಾಗಿದೆ. ಅವರು ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ ಎಂದು ಹೇಳಲಾಗಿದೆ.

ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳು ವರ್ತೂರು ಸಂತೋಷ್ ಬಂಧಿಸಿದ್ದಾರೆ ಎನ್ನಲಾಗಿದೆ. ಅರಣ್ಯ ಇಲಾಖೆ ಶನಿವಾರ ಸಂಜೆ (ಅಕ್ಟೋಬರ್ 22) ತಡರಾತ್ರಿ ಬಿಗ್ ಬಾಸ್ ಮನೆಗೆ ತಲುಪಿದ್ದು, ಪರೀಕ್ಷೆ ನಡೆಸಲು ಸ್ಪರ್ಧಿಯಿಂದ ಲಾಕೆಟ್‌ ಹೊರಗೆ ತರುವಂತೆ ಸೂಚಿಸಿದೆ. ಪರೀಕ್ಷೆಯ ನಂತರ, ಅಧಿಕಾರಿಗಳು ಅವು ನಿಜವಾದ ಹುಲಿ ಉಗುರುಗಳು ಎಂದು ದೃಢಪಡಿಸಿದರು. ನಂತರ ಬಿಗ್ ಬಾಸ್ ಆಯೋಜಕರಿಗೆ ಸ್ಪರ್ಧಿಯನ್ನು ಹಸ್ತಾಂತರಿಸುವಂತೆ ಕೇಳಿಕೊಂಡರು. ಕೆಲವು ಗಂಟೆಗಳ ನಂತರ, ವರ್ತೂರು ಸಂತೋಷ್ ಬಿಗ್ ಬಾಸ್ ಮನೆಯಿಂದ ಹೊರನಡೆದರು ಮತ್ತು ಅರಣ್ಯ ಇಲಾಖೆಯಿಂದ ಅವರನ್ನು ಬಂಧಿಸಲಾಯಿತು.

RELATED ARTICLES  ಕಾಗಾಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 415 ನೆಯ ಇ ಸಿ ಜಿ ಯಂತ್ರ ಉಚಿತ ಕೊಡುಗೆ


ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇಂದು ಮ್ಯಾಜಿಸ್ಟ್ರೇಟ್ ಮುಂದೆ ಅಧಿಕಾರಿಗಳು ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.
ವರ್ತೂರು ಸಂತೋಷ್ ಅವರು ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ.

RELATED ARTICLES  ಇಂದಿನ ದಿನ ನಿಮ್ಮ ಪಾಲಿಗೆ ಹೇಗಿದೆ ಗೊತ್ತೇ? ಇಲ್ಲಿದೆ ನೋಡಿ 16/04/2019 ರ ರಾಶಿ ಫಲ