ಬೆಂಗಳೂರು : ಹುಲಿ ಉಗುರಿನ ಲಾಕೆಟ್‌ ಧರಿಸಿದ್ದ ಆರೋಪದ ಅಡಿಯಲ್ಲಿ ಬಿಗ್ ಬಾಸ್ 10ನೇ ಆವೃತ್ತಿಯ ಅಭ್ಯರ್ಥಿ ವರ್ತೂರು ಸಂತೋಷ ಅವರ ಬಂಧನದ ಬೆನ್ನಲ್ಲೇ ನಟ ದರ್ಶನ ವಿರುದ್ಧ ಕೂಡ ಹುಲಿ ಉಗುರು ಧರಿಸಿದ ಆರೋಪ ಮಾಡಿ ದೂರು ನೀಡಲಾಗಿದೆ ಎಂದು ವರದಿಯಾಗಿದೆ. ದರ್ಶನ್ ಹುಲಿ ಉಗುರು ಲಾಕೆಟ್ ಧರಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಇದೇ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ ಎಂಬವರು ಎನ್ನುವವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

RELATED ARTICLES  ವಿದ್ಯಾರ್ಥಿ ವಾಹಿನಿಯಿಂದ ಯೋಗ ದಿನಾಚರಣೆ

ನಟ ದರ್ಶನ್ ಹಾಕಿರುವ ಬಂಗಾರದ ಚೈನ್‌ನಲ್ಲಿ ಹುಲಿಯ ಉಗುರು ಇದೆ. ಅವರು ಕಾನೂನು ಉಲ್ಲಂಘಿಸಿದ್ದಾರೆ. ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕುಳಿತಿದ್ದಾರೆ, ಹೀಗಾಗಿ ದರ್ಶನ್ ಮತ್ತು ವಿನಯ್ ಗುರೂಜಿಯನ್ನು ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

RELATED ARTICLES  ಕಾಂಗ್ರೆಸ್, ಸೋತ ಕ್ಷೇತ್ರಗಳಿಗೆ ತಲಾ ಮೂವರು ಅಭ್ಯರ್ಥಿಗಳ ಪಟ್ಟಿ ಅಂತಿಮ.