ಬೆಂಗಳೂರು : ಬಂಗಾಳಕೊಲ್ಲಿಯ ಸೃಷ್ಟಿಯಾಗಿರುವ ಚಂಡಮಾರುತ ‘ಹಮೂನ್’ ತೀವ್ರಗೊಂಡಿದೆ. ಪರಿಣಾಮವಾಗಿ ಕರ್ನಾಟಕದಲ್ಲಿ ಕೆಲ ಜಿಲ್ಲೆಗಳಲ್ಲಿ ಅಕ್ಟೋಬರ್ 29ರಿಂದ ಮಳೆಯಾಗಲಿದೆ. ರಾಜ್ಯ ಒಳನಾಡಿನ ಮೂರು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಹಳದಿ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ʼಹಮೂನ್‌ʼ ಚಂಡಮಾರುತ ದೇಶದ ಅನೇಕ ರಾಜ್ಯದಲ್ಲಿ ತನ್ನ ಪ್ರಭಾವ ಉಂಟು ಮಾಡಲಿದೆ.

RELATED ARTICLES  ಕುಮಟಾ ಮಿನಿ ವಿಧಾನಸೌಧಕ್ಕೆ ಕೆಲವು ಕಛೇರಿಗಳ ಸ್ಥಳಾಂತರ : ಯಾವೆಲ್ಲಾ ಕಛೇರಿಗಳು ಕಾರ್ಯಾರಂಭ ಮಾಡಲಿದೆ ಗೊತ್ತಾ? ಎಲ್ಲೆಲ್ಲಿ ಏನೇನು?


ಅಕ್ಟೋಬರ್ 29ರಿಂದ ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಎರಡು ದಿನ ಗುಡಗು ಸಹಿತ ಭಾರೀ ಮಳೆ ಅಬ್ಬರಿಸಲಿದೆ. ಹೀಗಾಗಿ ಈ ಮೂರು ಜಿಲ್ಲೆಗಳಿಗೆ ಅಕ್ಟೋಬರ್ 30 ಹಾಗೂ 31ರಂದು ಹಳದಿ ಎಚ್ಚರಿಕೆ ನೀಡಲಾಗಿದೆ.

RELATED ARTICLES  ಹೊನ್ನಾವರ ತಾಲೂಕಿನ ರಿಕ್ಷಾ ಚಾಲಕ, ಮಾಲಕರಿಗೆ ಔತಣಕೂಟ, ಉಚಿತ ಸಮವಸ್ತ್ರ ವಿತರಣೆ ಮತ್ತು ರಿಕ್ಷಾ ಪಾಸಿಂಗ್ ಯೋಜನೆ


ಅಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಶಿವಮೊಗ್ಗ, ವಿಜಯನಗರ, ಚಾಮರಾಜನಗರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಸಾಧಾರಣದಿಂದ ಜೋರಾಗಿ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಇವೆ ಎಂದು ತಿಳಿಸಲಾಗಿದೆ.