ಕುಮಟಾ : ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉತ್ತರಕನ್ನಡ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ನಡೆದ ೨೦೨೩-೨೪ನೇ ಸಾಲಿನ ವಿಶ್ವ ಸೊಳ್ಳೆ ನಿಯಂತ್ರಣ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಂದ ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ ೯ ನೇ ತರಗತಿ ವಿದ್ಯಾರ್ಥಿ ಎನ್.ವಿ ಶ್ರೀನಾಗ ಹಿರೇಗುತ್ತಿ ಹಾಗೂ ರಜತ ನಾಗರಾಜ ನಾಯಕ ಮೊಗಟಾ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿರುತ್ತಾರೆ.
ಕುಮಟಾ ತಾಲೂಕಿಗೆ ಪ್ರಥಮಸ್ಥಾನ ಪಡೆದ ವಿದ್ಯಾರ್ಥಿ ಎನ್.ವಿ ಶ್ರೀನಾಗ ಹಾಗೂ ರಜತ ನಾಗರಾಜ ನಾಯಕ ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕ ಮಹಾದೇವ ಬಿ ಗೌಡರವರಿಗೆ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ಎನ್ ನಾಯಕ, ಉಪಾಧ್ಯಕ್ಷ ಶ್ರೀಕಾಂತ ನಾಯಕ ಕಾರ್ಯದರ್ಶಿ ಮೋಹನ ಬಿ ಕೆರೆಮನೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧ್ಯಾಪಕ ರೋಹಿದಾಸ ಎಸ್ ಗಾಂವಕರ ಹಾಗೂ ಶಿಕ್ಷಕವೃಂದ ಮತ್ತು ಹಿರೇಗುತ್ತಿ, ಗ್ರಾಮ ಪಂಚಾಯತ ಅಧ್ಯಕ್ಷ ಶಾಂತಾ ಎನ್ ನಾಯಕ ಹಾಗೂ ಸದಸ್ಯರು, ಆಶ್ರಯ ಪೌಂಡೇಶನ್‌ನ ರಾಜೀವ ಗಾಂವಕರ, ಸುನೀಲ್ ಪೈ ಮಾದನಗೇರಿ, ಬ್ರಹ್ಮ ಜಟಕ ಯುವಕ ಸಂಘ ಅಧ್ಯಕ್ಷ ಸಣ್ಣಪ್ಪ ಮಾರುತಿ ನಾಯಕ ಹಾಗೂ ಸದಸ್ಯರು, ಊರಿನ ನಾಗರಿಕರು ಅಭಿನಂದಿಸಿ ಮುಂದಿನ ಹಂತಕ್ಕೆ ಶುಭ ಕೋರಿದ್ದಾರೆ.