ಕುಮಟಾ : ಆರೋಗ್ಯಯುತ ಜೀವನಕ್ಕೆ ಆಟೋಟ ಸ್ಪರ್ಧೆಗಳು ಅತಿಮುಖ್ಯ. ನಮ್ಮ ಜಿಲ್ಲೆಯಲ್ಲಿ ಉತ್ತಮ ಕ್ರೀಡಾಪಟುಗಳಿದ್ದಾರೆ, ತರಬೇತುದಾರರೂ ಇದ್ದಾರೆ. ಕ್ರೀಡಾಕೂಟಗಳಿಗೆ ಹಾಗೂ ಕ್ರೀಡಾಪಟುಗಳ ಸಾಧನೆಗೆ ಪೂರಕವಾಗುವ ಸುವ್ಯವಸ್ಥಿತ ಮೈದಾನ ಒದಗಿಸುವುದಕ್ಕಾಗಿ ಪ್ರಯತ್ನಿಸುತ್ತೇನೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು ಅವರು ಕುಮಟಾ ಪಟ್ಟಣದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ 17ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟ ಉದ್ಘಾಟಿಸಿ, ಸಂಘಟಕರಿಂದ ಗೌರವ ಸ್ವೀಕರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಾಲೆಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಮಕ್ಕಳಲ್ಲಿರಲಿ ಅಥವಾ ಪ್ರೌಢರಲ್ಲಿರಲಿ, ಜೀವನದಲ್ಲಿ ಆರೋಗ್ಯ ಒಂದಿದ್ದರೆ ಏನನ್ನಾದರೂ ಸಾಧಿಸಬಹುದು. ಆರೋಗ್ಯಯುತ ಜೀವನಕ್ಕೆ ಆಟೋಟ ಸ್ಪರ್ಧೆಗಳು ಅತಿಮುಖ್ಯ. ನಮ್ಮ ಜಿಲ್ಲೆಯಲ್ಲಿ ಉತ್ತಮ ಕ್ರೀಡಾಪಟುಗಳಿದ್ದಾರೆ, ತರಬೇತುದಾರರೂ ಇದ್ದಾರೆ. ಕ್ರೀಡಾಕೂಟಗಳಿಗೆ ಹಾಗೂ ಕ್ರೀಡಾಪಟುಗಳ ಸಾಧನೆಗೆ ಪೂರಕವಾಗುವ ಸುವ್ಯವಸ್ಥಿತ ಮೈದಾನ ಒದಗಿಸುವುದಕ್ಕಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

RELATED ARTICLES  "ಎಲ್ಲರ ಗಮನ ಸೆಳೆಯುತ್ತಿದೆ ಮುರುಡೇಶ್ವರ ವಿದ್ಯಾರ್ಥಿಗಳು ತಯಾರಿಸಿದ ಪೆಟ್ರೋಲ್‌ನಿಂದ ಓಡುವ ಸೈಕಲ್‌"

ವಿದ್ಯಾರ್ಥಿ ಜೀವನವೆಂದರೆ ಆಟ, ಪಾಠ, ಮನೋರಂಜನೆ ನೆನಪಾಗುತ್ತದೆ. ವಿದ್ಯಾರ್ಥಿಗಳೆಂದರೆ ಕೇವಲ ಓದುತ್ತಾ ಇರುವವರು ಮಾತ್ರವಲ್ಲ, ದೈಹಿಕವಾಗಿ ಕೂಡ ದಂಡನೆ ಇರಬೇಕು. ಕ್ರೀಡೆಗಳಲ್ಲಿ ಭಾಗವಹಿಸಿದರೆ ಓದಲು ಏಕಾಗ್ರತೆ ಬರುವುದಿಲ್ಲ ಎನ್ನುವುದು ತಪ್ಪು. ಪಾಠದ ಜೊತೆಗೆ ಆಟ ವಿದ್ದರೆ ಮಾತ್ರ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಶಾಸಕ ದಿನಕರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ 2023-24ನೆ ಸಾಲಿನ ಪ್ರೌಢಶಾಲೆಗಳ ಜಿಲ್ಲಾಮಟ್ಟದ ಇಲಾಖಾ ಕ್ರೀಡಾಕೂಟಕ್ಕೆ ಕುಮಟಾ ಆತಿಥ್ಯ ವಹಿಸಿರುವುದು ಸಂತೋಷದ ಸಂಗತಿ. ಇಲ್ಲಿ ಕ್ರೀಡಾಕೂಟವನ್ನು ಸಂಘಟಿಸಲು ಶಿಕ್ಷಕರು ಶ್ರಮವಹಿಸಿದ್ದು, ಮೈದಾನವನ್ನು ಅಚ್ಚುಕಟ್ಟಾಗಿ ಸಿದ್ಧಗೊಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳೆರಡೂ ಅತಿಮುಖ್ಯ. ಆಟೋಟಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಮತೋಲನ ಸಾಧ್ಯವಾಗುತ್ತದೆ. ಕ್ರೀಡಾಸ್ಫೂರ್ತಿಯೊಂದಿಗೆ ಆಟಗಳಲ್ಲಿ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.

RELATED ARTICLES  ಸೂರಜ ನಾಯ್ಕ ಶಂಕರ ನಾಯ್ಕ ಬಿಡುಗಡೆಗೆ ಮನವಿ

ಜಿಲ್ಲಾಡಳಿತ, ಜಿ. ಪಂ. ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ ಉತ್ತರಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಈ ಕ್ರೀಡಾಕೂಟವು ನೆರವೇರಿತು.

ಕುಮಟಾ ಪುರಸಭಾ ಸದಸ್ಯ ಸೂರ್ಯಕಾಂತ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಎಲ್. ಭಟ್, ಕುಮಟಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಧೀರು ಶಾನಭಾಗ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್. ಬಿ. ನಾಯಕ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಎಚ್. ಬಿ. ನಾಯಕ, ಬಿ. ಆರ್. ಸಿ. ಸಮನ್ವಯಾಧಿಕಾರಿ ರೇಖಾ ನಾಯ್ಕ, ಜಿಲ್ಲೆಯ ಎಲ್ಲ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್. ಬಿ ನಾಯ್ಕ, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.