Home ANKOLA ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ವಂಚನೆ.

ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ವಂಚನೆ.

ಕಾರವಾರ: ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಕೆಲವು ಅಪರಿಚಿತ ವ್ಯಕ್ತಿಗಳು ಅಮಾಯಕರಿಂದ ಹಣ ಪಡೆದು ವಂಚಿಸುತ್ತಿರುವುದು ಸಂಸ್ಥೆಯ ಗಮನಕ್ಕೆ ಬಂದಿರುತ್ತದೆ. ಕೈಗಾ ಅಣು ವಿದ್ಯುತ್ ನಿಗಮವು ಕೇಂದ್ರ ಸರ್ಕಾರದ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಪ್ರಸ್ತುತ ಕೆಲವು ವಿಭಾಗದಲ್ಲಿ ಉದ್ಯೋಗ ನೇಮಕ ಕುರಿತ ಪ್ರಕ್ರಿಯೆಗಳು ನಡೆಯುತ್ತಿದ್ದು, ಎಲ್ಲಾ ಪ್ರಕ್ರಿಯೆಗಳು ಕೇಂದ್ರ ಮಾರ್ಗಸೂಚಿಯಂತೆ ಸರ್ಕಾರದ ಮತ್ತು ಸಂಸ್ಥೆಯ ಮಾರ್ಗಸೂಚಿಯಂತೆ ಅತ್ಯಂತ ಪಾರದರ್ಶಕವಾಗಿ ವಿಶೇಷ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳಡಿಯಲ್ಲಿ ಮೆರಿಟ್ ಆಧಾರದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಅಪರಿಚಿತ ವ್ಯಕ್ತಿಗಳಿಂದ ಕೈಗಾದಲ್ಲಿ ಉದ್ಯೋಗ ಪಡೆಯಲು ಹಣ ನೀಡಿ ವಂಚನೆಗೊಳಗಾಗದೆ ಎಚ್ಚರಿಕೆಯಿಂದ ಇರುವಂತೆ ತಿಳಿಸುತ್ತಾ, ಈ ರೀತಿಯ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಅದಕ್ಕೆ ಕೈಗಾ ಸಂಸ್ಥೆ ಜವಾಬ್ದಾರಿಯಲ್ಲ ಎಂದು ಕೈಗಾದ ಸೈಟ್‌ ಡೈರೆಕ್ಟರ್ ಪ್ರಮೋದ್ ಜಿ ರಾಯಚೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.