ಸಿದ್ದಾಪುರ: ಕಬ್ಬು ತುಂಬಿಕೊಂಡು ಹೋಗಿತ್ತಿದ್ದ ಲಾರಿ ಪಲ್ಟಿಯಾಗಿ ಐವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಜೋಗಿನಮಠ ಹತ್ತಿರದ ತಿರುವಿನಲ್ಲಿ ನಡೆದಿದೆ.
ಹೊನ್ನಾವರ ಬೆಂಗಳೂರು ಹೆದ್ದಾರಿಯಲ್ಲಿ ಸಾಗರ ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಲಾರಿ ರಸ್ತೆಯ ಎಡ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷತನ ಘಟನೆ ಸಂಭವಿಹಿಸಲು ಕಾರಣ ಎಂದು ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಾಯಾಳುಗಳನ್ನು ಚಿಕಿತ್ಸೆಗೆ ಸಾಗರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.