ಕಾರವಾರ : ತಾಲೂಕಿನ ಪ್ರಸಿದ್ಧ ಕ್ರಿಕೆಟ್ ಆಟಗಾರ ಹಾಗೂ ಕ್ರಿಕೆಟ್ ಕೋಚ್ ಆಗಿದ್ದ ಅಜಯ್ ಕಾಮತ್ (28) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಪದ್ಮನಾಭನಗರದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕ್ರಿಕೆಟ್ ಆಟಗಾರನಾಗಿ, ಕೋಚ್ ಆಗಿದ್ದ ಅಜಯ್ ಬಿಣಗಾದ ಆದಿತ್ಯಾ ಬಿರ್ಲಾ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹೆಂಡತಿ ಮಗು ಮಲಗಿದ್ದ ಕೋಣೆಯ ಬಾಗಿಲು ಹಾಕಿ, ಹಾಲ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕಾರವಾರ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

RELATED ARTICLES  ಕೈಗಾ ಅಣು ವಿದ್ಯುತ್ ನಿಗಮದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ವಂಚನೆ.