ಕಾರವಾರ: ದಾಂಡೇಲಿ ನಗರಸಭೆ ವ್ಯಾಪ್ತಿಯ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ ಬಯಲು ಬಹಿರ್ದೆಸೆ ಅಭ್ಯಾಸಗಳಿಗೆ ಹಿಂತಿರುಗುವುದನ್ನು ತಡೆಯಲು ಗೃಹ ಬಳಕೆಯ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಂತ ಜಾಗ ಹೊಂದಿದ ಸ್ಥಳೀಯರು ಸ್ಥಳೀಯವಾಗಿ ಲಭ್ಯರುವ ಜಾಗೆಯಲ್ಲಿ ವೈಯಕ್ತಿಕ ಶೌಚಾಲಯ ಕಟ್ಟಿಕೊಳ್ಳಲು, ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಡಿ.10 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ದಾಂಡೇಲಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.