ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸರ್ವೋದಯ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ವಿಭಾಗ ಮಟ್ಟದ ಸಾಂಸ್ಕೃತಿಕ ಹಾಗೂ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಸಂಸ್ಥೆಯ ಗರಿಮೆಯನ್ನು ಹೆಚ್ಚಿಸಿದ್ದಾರೆ.
ದ್ವಿತೀಯ ಪಿಯುಸಿ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಸೊನಾಲಿ ಶೇಟ್ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಸಹಿತ ನಗದು ಬಹುಮಾನವನ್ನು ಪಡೆದಿರುತ್ತಾಳೆ. ಹಾಗೆಯೇ ಪ್ರಥಮ ಪಿಯುಸಿ ವಿಭಾಗದ ಜಾನಪದ ಗೀತೆಯಲ್ಲಿ ಗಿರೀಶ ಶಾನಭಾಗ ದ್ವಿತೀಯ ಸ್ಥಾನ ಮತ್ತು ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಅನನ್ಯಾ ಭಾಗ್ವತ ತೃತೀಯ ಸ್ಥಾನ ಗಳಿಸಿ ಪ್ರಶಸ್ತಿ ಸಹಿತ ನಗದು ಬಹುಮಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲ ಕಿರಣ ಭಟ್ಟ, ಉಪಪ್ರಾಂಶುಪಾಲೆ ಸುಜಾತಾ ಹೆಗಡೆ, ಸಾಂಸ್ಕೃತಿಕ ಚಟುವಟಿಕೆಗಳ ಸಂಯೋಜಕರಾದ ಗುರುರಾಜ ಶೆಟ್ಟಿ, ಫರ್ಜಾನಾ ಶೇಖ್, ದೀಕ್ಷಿತಾ ಕುಮಟೆಕರ ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ಮುಂದಿನ ಹಂತದ ಸ್ಪರ್ಧೆಗಳಿಗೆ ಶುಭ ಹಾರೈಸಿದ್ದಾರೆ.