ಹಿರಿಯ ನಟಿ ಲೀಲಾವತಿ ಅವರು ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಲೀಲಾವತಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಡಿ.8) ಸಂಜೆ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ

ಅನಾರೋಗ್ಯಕ್ಕೀಡಾಗಿದ್ದ ಲೀಲಾವತಿ
86 ವರ್ಷದ ನಟಿ ಲೀಲಾವತಿ ಅವರು ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಹಾಸಿಗೆ ಹಿಡಿದಿದ್ದರು. ನೆಲಮಂಗಲ ತಾಲ್ಲೂಕಿನ ಸೋಲನದೇವನಹಳ್ಳಿಯಲ್ಲಿ ಇರುವ ತೋಟದ ಮನೆಯಲ್ಲಿ ಲೀಲಾವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

RELATED ARTICLES  ಚುನಾವಣಾ ವೇಳಾಪಟ್ಟಿ ಪ್ರಕಟವಾದ ನಂತರ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುವ ಯಾವುದೇ ಅಧಿಕಾರಿ ಮತ್ತು ನೌಕರರಿಗೆ ರಜೆ ಇರುವುದಿಲ್ಲ.

ಬಹುಭಾಷಾ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಲೀಲಾವತಿ
ಬೆಳ್ತಂಗಡಿ ಮೂಲದ ಲೀಲಾವತಿ ಅವರು, ಓದಿದ್ದು 2ನೇ ತರಗತಿ ಮಾತ್ರ. 1958ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದರು. ‘ಮಾಂಗಲ್ಯ ಯೋಗ’ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿ ಲೀಲಾವತಿ ಅವರು, ಆನಂತರ ಕನ್ನಡ, ತೆಲುಗು, ತಮಿಳು, ತುಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಡಾ ರಾಜ್‌ಕುಮಾರ್ ಅವರ ಜೊತೆಗೆ ಸಾಕಷ್ಟು ಸಿನಿಮಾಗಳಲ್ಲಿ ಲೀಲಾವತಿ ಅವರು ಬಣ್ಣ ಹಚ್ಚಿದ್ದರು. ವಿನೋದ್ ರಾಜ್ ನಟನೆಯ ‘ಯಾರದು’ (2009) ಚಿತ್ರದ ನಂತರ ನಟನೆಯಿಂದ ಅವರು ದೂರ ಉಳಿದಿದ್ದರು.

RELATED ARTICLES  ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ವಿವಿಧ ಕ್ಷೇತ್ರದ ಸಾಧಕಿಯರಿಗೆ ಪ್ರಶಸ್ತಿ.