ಯಲ್ಲಾಪುರ: ಅರಬೈಲ್ ಹೆದ್ದಾರಿಯಲ್ಲಿ ಖಾಸಗಿ ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಗೋಕರ್ಣಕ್ಕೆ ಪ್ರವಾಸಿಗರನ್ನು ಕರೆತಂದಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಪ್ರವಾಸ ಮುಗಿಸಿ ವಾಪಸ್ಸಾಗುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ.

RELATED ARTICLES  ಚದುರಂಗ ಕ್ಷೇತ್ರದ ವಿಶೇಷ ಪ್ರತಿಭೆ, ಹೊನ್ನಾವರದ ಸಮರ್ಥನಿಗೆ ಪ್ರತಿಭಾ ಪುರಸ್ಕಾರ.

ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಯಲ್ಲಾಪುರ ಪಿಎಸ್ಐ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಅಂತರಾಷ್ಟ್ರೀಯ ಸಾಕ್ಷರ ದಿನ ಹೊನ್ನಾವರದಲ್ಲಿ :ಉಮೇಶ ಮುಂಡಳ್ಳಿ ಗಾಯನ