ತಾಲೂಕಾ ಆರ್ಯ ಈಡಿಗ ನಾಮಧಾರಿ ನೌಕರರ ಸಂಘ ಕುಮಟಾದ ವತಿಯಿಂದ ನುರಿತ ವಿಷಯ ತಜ್ಞರಿಂದ ನಾಮಧಾರಿ ಸಮಾಜದ ದ್ವಿತಿಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಕುಮಟಾ ತಾಲೂಕಿನ ನಾಮಧಾರಿ ಸಭಾಭವನದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದ ಉದ್ಘಾಟನೆಯನ್ನು ತಾಲೂಕಾ ನಾಮಧಾರಿ ಸಮಾಜದ ಅಧ್ಯಕ್ಷ ಜಯಂತ ನಾಯ್ಕ ದೀಪ ಬೆಳಗಿಸುವ ಮೂಲಕ ನೆರವರಿಸಿದ್ರು. ಬಳಿಕ ಮಾತನಾಡಿದ ಜಯಂತ ನಾಯ್ಕ ನಮ್ಮ ಸಮಾಜದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮಾತ್ರವಲ್ಲದೆ ತಮ್ಮ ವ್ಯಕ್ತಿತ್ವದವನ್ನು ಕೂಡ ವಿಕಸನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು..
ಇದೇ ಸಂದರ್ಬದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಅರಣ್ಯ ಇಲಾಖೆಯ ಕುಮಟಾ ಎ.ಸಿ.ಎಫ್ , ಎಸ್.ವಿ.ನಾಯ್ಕ ಆಗಮಿಸಿದ್ರು ಮತ್ತು ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿ ಸಮಾಜದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಅವರ ಬದುಕನ್ನು ರೂಪಿಸಿಕೊಳ್ಳುವ ದಾರಿಯನ್ನು ಮಾಡಿಕೊಡಬೇಕು, ವಿದ್ಯಾರ್ಥಿಗಳು ಯಾವ ದಿಕ್ಕಿನಲ್ಲಿ ಸಾಗಬೇಕು ಎನ್ನುವ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು..
ಉದ್ಯಮಿ ಎಚ್,ಎನ್,ನಾಯ್ಕ ಮಾತನಾಡಿ ನಮ್ಮ ಸಮಾಜದವರ ಹತ್ತಿರ ಮುಂದುವರಿದ ಸಮಾಜದವರೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ. ಕೇವಲ ಶಿಕ್ಷಣದಲ್ಲಿ ಮಾತ್ರ ಯುವಕರು ಮುಂದುವರಿಯುವುದಲ್ಲದೆ ಶಿಕ್ಷಣೇತರ ವಿಷಯದಲ್ಲಿ ಮುಂದುವರಿಯಬೇಕಾದ ಅವಶ್ಯ ಇದೆ.. ಆದ್ದರಿಂದ ವಿವಿಧ ರಂಗದಲ್ಲಿ ನಾವು ಹೇಗೆ ನಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎನ್ನುವ ಕುರಿತು ಮಾಹಿತಿ ನೀಡುವುದೆ ಈ ಶಿಬಿರದ ಉದ್ದೇಶವಾಗಿದೆ ಎಂದರು..
ಈ ಕಾರ್ಯಕ್ರಮದ ವೇದಿಕೆಯಲ್ಲಿ ನಾಮಧಾರಿ ನೌಕರ ಸಂಘದ ಅಧ್ಯಕ್ಷ ಎನ್.ಆರ್,ನಾಯ್ಕ,ಸತ್ಯಾ ನಾಯ್ಕ ಮುಂತಾದವರು ಉಪಸ್ಥಿತರಿದ್ದರು. ಶಿಬಿರಕ್ಕೆ ನಾಮಧಾರಿ ಸಮಾಜದ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ರು..