ಭಟ್ಕಳ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ, ಭಟ್ಕಳ ತಾಲೂಕಿನ ಬಂದರ-ಮಾವಿನಕುರ್ವೆಯ ತ್ರಿವೇಣೀ ಖಾರ್ವಿ ಹಾಗೂ ವಿಷ್ಣು ಖಾರ್ವಿ ಯವರ ಪುತ್ರಿ ಕುಮಾರಿ. ತ್ರಿಶಾ ಖಾರ್ವಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದು, ಮಧ್ಯಪ್ರದೇಶ ರಾಜ್ಯದ ಭೂಪಾಲ್‌ದಲ್ಲಿ ಜರುಗುವ ಅಂತರ ವಿಶ್ವವಿದ್ಯಾಲಯ ರಾಷ್ಟ್ರಮಟ್ಟದ ಕರಾಟೆ ಕ್ರೀಡೆಯಲ್ಲಿ ದಕ್ಷಿಣವಲಯವನ್ನು ಪ್ರತಿನಿಧಿಸಲಿದ್ದು, ಈ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಕರು, ಸಿಬ್ಬಂದಿವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ.

RELATED ARTICLES  ಸಮುದ್ರದಲ್ಲಿ ಈಜಲು ತೆರಳಿದವರು ನೀರುಪಾಲು.