ಕುಮಟಾ : ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ನರೇಂದ್ರ ಮೋದೀಜಿ ಅವರು 2014ರಿಂದ ಇಲ್ಲಿಯ ವರೆಗೆ ಅನೇಕ ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು ಅವರು ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಉತ್ತರಕನ್ನಡ ಹಾಗೂ ಪುರಸಭೆ ಕುಮಟಾ ಇದರ ಸಂಯುಕ್ತ ಆಶ್ರಯದಲ್ಲಿ ಕುಮಟಾದ ಪುರಭವನದಲ್ಲಿ ಹಮ್ಮಿಕೊಂಡಿದ್ದ ದೀನದಯಾಳ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಪಿಎಂ ಸ್ವನಿಧಿ ಕಾರ್ಯಕ್ರಮದಡಿಯಲ್ಲಿ “ಸ್ವನಿಧಿಯಿಂದ ಸಮೃದ್ಧಿ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಎಂ ಸುರಕ್ಷಾ ಭೀಮಾ ಯೋಜನೆ, ಪಿಎಂ ಜೀವನ್ ಜ್ಯೋತಿ ಭೀಮಾ ಯೋಜನೆ, ಪಿಎಂ ಜನ್ ಧನ್ ಯೋಜನೆ, ಮಾತೃ ವಂದನಾ ಯೋಜನೆ, ಜನನಿ ಸುರಕ್ಷಾ ಯೋಜನೆ, ಪಿಎಂ ಶ್ರಮಯೋಗಿ ಮನ್ ಧನ್ ಯೋಜನೆ ಇವುಗಳು ಪ್ರಧಾನಿ ಮೋದಿಯವರು ಜಾರಿಗೆ ತಂದ ಯೋಜನೆಗಳು.  ಇವುಗಳನ್ನು ಜನಸಾಮಾನ್ಯರ ಉಪಯೋಗಕ್ಕಾಗಿ ಜಾರಿಗೆ ತಂದಿದ್ದು ಇದರ ಬಗ್ಗೆ ಅಧಿಕಾರಿಗಳಿಂದ ಸೂಕ್ತ ಮಾಹಿತಿಪಡೆದು ಈ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ನೋಂದಾಯಿತ ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ಒದಗಿಸಲು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪಿಎಂ ಸ್ವನಿಧಿ ಯೋಜನೆಯನ್ನು ರೂಪಿಸಲಾಗಿದೆ. ಇದರ ಪ್ರಯೋಜನವನ್ನು ಬೀದಿಬದಿ ವ್ಯಾಪಾರಿಗಳು ಪಡೆದುಕೊಳ್ಳಬೇಕು. ವಂಶಪಾರಂಪರಿಕ ವೃತ್ತಿಯನ್ನು ಆಧರಿಸಿರುವ ಕುಶಲಕರ್ಮಿಗಳಿಗಾಗಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಪ್ರಧಾನಮಂತ್ರಿಗಳು ನೀಡಿದ್ದಾರೆ. ಜನರನ್ನು ಆರ್ಥಿಕವಾಗಿ ಸದೃಢವಾಗಿಸುವುದು ಮೋದಿಜಿಯವರ ಕನಸಾಗಿದೆ ಎಂದು ಹೇಳಿದರು.

RELATED ARTICLES  ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ.

ಪುರಸಭಾ ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ ಅಂಬಿಗ, ತಾಲೂಕಾ ಆರೋಗ್ಯಾಧಿಕಾರಿ ಆಜ್ಞಾ ನಾಯಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ನಾಗರತ್ನಾ ನಾಯಕ, ಕಾರ್ಮಿಕ ಇಲಾಖೆಯ ಅಧಿಕಾರಿ ಗುರುಪ್ರಸಾದ್ ನಾಯ್ಕ್, ಪುರಸಭಾ ಸದಸ್ಯರುಗಳಾದ ಮೋಹಿನಿ ಗೌಡ, ಸಂತೋಷ ನಾಯ್ಕ್, ಮಹೇಶ ನಾಯ್ಕ್, ಶೈಲಾ ಗೌಡ, ಅನಿಲ್ ಹರ್ಮಲಕರ್, ಸುಶೀಲಾ ಮುಕ್ರಿ ಉಪನ್ಯಾಸಕ ಜಿ. ಟಿ. ನಾಯ್ಕ್ ಹಾಗೂ ಇತರರು ಇದ್ದರು.

RELATED ARTICLES  ಬಂದ್ ಆಗಲಿದೆ ಕುಮಟಾ ಶಿರಸಿ ರಸ್ತೆ.