ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕ್ಕೆ ಆಗ್ರಹಿಸಿ ಫೆ. 5 ನಾಳೆಯಿಂದ ಕುಮಟಾದಿಂದ ಪಾದಯಾತ್ರೆ ಆರಂಭವಾಗಲಿದೆ. ಬೆಳಗ್ಗೆ 7:30 ಕ್ಕೆ ಈ ಸ್ವಾಭಿಮಾನದ ಪಾದಯಾತ್ರೆ ಪ್ರಾರಂಭವಾಗಲಿದ್ದು, ಫೇ 7 ರಂದು ಭಟ್ಕಳ ತಲುಪಲಿದೆ.
ಕುಮಟಾ -ಜನರ ಜೀವ ಉಳಿಸುವ ದೃಷ್ಟಿಯಿಂದ ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅವಶ್ಯವಿದ್ದು ಅದನ್ನು ನಿರ್ಮಾಣ ಮಾಡಲು ತಕ್ಷಣ ಸರ್ಕಾರ ಹಣ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ, ಈ ಹಿಂದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನಿಗದಿಯಾಗಿದ್ದ ಸ್ಥಳದಲ್ಲಿ ಭೂಮಿ ಪೂಜೆ ನೆರವೇರಿಸಿ, ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಕುಮಟಾ ದಿಂದ ಭಟ್ಕಳ ವರೆಗೆ 3 ದಿನಗಳ ಪಾದಯಾತ್ರೆ ಆರಂಭಿಸಲಿದ್ದಾರೆ. ಫೆ 5 ರಿಂದ ಫೆ 7 ಈ ಮೂರು ದಿನದಲ್ಲಿ ಭಟ್ಕಳವನ್ನು ತಲುಪಿ, ಸಚಿವ ಮಂಕಾಳ ವೈದ್ಯರಿಗೆ ಮನವಿ ನೀಡಲಿದ್ದೇವೆ ಎಂದು ಹೋರಾಟಗಾರ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ.