ಕುಮಟಾ : ಉಪನಿರ್ದೆಶಕರ ಕಛೇರಿ ಮಧುಗಿರಿ ಶೈಕ್ಷಣಿಕ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಧುಗಿರಿ ಇವರ ಸಂಯುಕ್ತಾಶ್ರಯದಲ್ಲಿ ಮಧುಗಿರಿ ರಾಜೀವಗಾಂದಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ವಿದ್ಯಾರ್ಥಿನಿ ದೇವಕಿ ಮಂಜುನಾಥ ಗೌಡ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ.
ವಿದ್ಯಾರ್ಥಿನಿಗೆ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕ ನಾಗರಾಜ ಜಿ. ನಾಯಕರವರಿಗೆ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ಎನ್. ನಾಯಕ, ಉಪಾಧ್ಯಕ್ಷ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಬಿ ಕೆರೆಮನೆ ಹಾಗೂ ಸದಸ್ಯರು, ಗ್ರಾಮ ಪಂಚಾಯತ ಅಧ್ಯಕ್ಷ ಪದಾಧಿಕಾರಿಗಳು, ಗ್ರಾಮಸ್ಥರು ಶುಭ ಹಾರೈಸಿದ್ದಾರೆ.