Home BHATKAL ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಭಟ್ಕಳ : ಮಾನಸಿಕ ಒತ್ತಡಕ್ಕೆ ಒಳಗಾದ ಮಹಿಳೆಯೋರ್ವಳು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಶಿರಾಲಿ ನೀರಕಂಠ ಕ್ರಾಸ್‌ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಶ್ರೀದೇವಿ ಎಂದು ಗುರುತಿಸಲಾಗಿದೆ. ಇವಳ ಆತ್ಮಹತ್ಯೆಗೆ ಈಕೆಯ ಗಂಡನೇ ಕಾರಣ ಎಂದು ಮೃತಳ ತಂದೆ ಪೊಲೀಸರಿಗೆ ದೂರು ನೀಡಿದ್ದು, ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.