ಕುಮಟಾ : ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಟ್ಟಣದ ಗಿಬ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.
ಫೆ. 8ರಂದು ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯ ಆಶುಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಚಂದ್ರಯಾನ-3 ಎಂಬ ವಿಷಯದ ಮೇಲೆ ಅತ್ಯುತ್ತಮವಾಗಿ ಭಾಷಣ ಮಾಡಿದ್ದಳು. ವಿದ್ಯಾರ್ಥಿನಿಯ ವಾಕ್ ಚಾತುರ್ಯಕ್ಕೆ ಪ್ರಥಮ ಸ್ಥಾನ ದೊರೆತ್ತಿದ್ದು, ಗಣ್ಯರು ಸಾಧಕ ವಿದ್ಯಾರ್ಥಿನಿಗೆ ಬಹುಮಾನ ನೀಡಿ ಗೌರವಿಸಿದ್ದಾರೆ.
ಭೂಮಿಕಾಳು ಕಾಲೇಜು ಪ್ರಾಧ್ಯಾಪಕ ನಾಗರಾಜ ಹೆಗಡೆಯವರ ಪುತ್ರಿಯಾಗಿದ್ದು, ಗಿಬ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಈ ಸಾಧನೆಯ ಮೂಲಕ ವಿದ್ಯಾರ್ಥಿನಿಯು ಶಾಲೆಗೆ, ತಾಲೂಕಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.