ಹೊನ್ನಾವರ : ಪಟ್ಟಣದ ರಥಬೀದಿಯ ಮನೆಯೊಂದರ ಬೆಲೆ ಬಾಳುವ ತಾಮ್ರದ ಹಂಡೆ ಕದ್ದು ಕಳ್ಳನೊಬ್ಬ ಪರಾರಿಯಾಗುತ್ತಿರುವ ಸಂದರ್ಭದಲ್ಲಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದ ಘಟನೆ ರವಿವಾರ ರಾತ್ರಿ ನಡೆದಿದೆ ಎನ್ನಲಾಗಿದೆ. ಇತ್ತೀಚಿಗೆ ಪದೇ ಪದೇ ಪಟ್ಟಣದಲ್ಲಿ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.