ಶಿರಸಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ ವಿಭಾಗದಲ್ಲಿ ಪ್ರಪ್ರಥಮ ಬಾರಿಗೆ ಬಸ್ಸಿನಲ್ಲಿ ನಿರ್ವಾಹಕರು ನೀಡುವ  ಟಿಕೇಟುಗಳನ್ನು ಕ್ಯೂಆರ್ ಕೋಡ್ ಮೂಲಕ ಪಡೆಯುವಂತ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ‌

ಸಂಸ್ಥೆಯ ವಿಭಾಗೀಯ ನಿಯಂತ್ರಣ ಅಧಿಕಾರಿ ಕೆ. ಶ್ರೀನಿವಾಸ್ ಸೋಮವಾರ ನಗರದ ಹೊಸ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ವ್ಯವಸ್ಥೆಗೆ ಚಾಲನೆ ನೀಡಿದರು.  ನಗದು ಹಣ ಇಲ್ಲದೇ ಹೋದಲ್ಲಿ ಕ್ಯೂಆರ್ ಕೋಡ್ ಮೂಲಕ ಪ್ರಯಾಣಿಕರ ಟಿಕೆಟ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಈ ವ್ಯವಸ್ಥೆಯ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಶ್ರೀನಿವಾಸ್ ಕರೆ ನೀಡಿದರು.

RELATED ARTICLES  ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜು - ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿರಸಿಯಲ್ಲಿ ಧರಣಿ ಮತ್ತು ಬೆಳಗಾವಿಯಲ್ಲಿ ಮುಖ್ಯ ಮಂತ್ರಿ ಯವರಿಗೆ ಮನವಿ ಸಲ್ಲಿಕೆ : ಅನಂತಮೂರ್ತಿ ಹೆಗಡೆ.

ಈ ಸಂದರ್ಭದಲ್ಲಿ ವಿಭಾಗದ ಅಧಿಕಾರಿಗಳಾದ  ಸರ್ವೇಶ್, ರವಿ ಕಬ್ಬೇರ್, ಪ್ರವೀಣ್ ಶೇಟ, ಕಿರಣ್ ನಾಯಕ್ ಹಾಜರಿದ್ದರು‌.