ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟಿನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜೆಇಇ (ಮೇನ್) 2024ರಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ಸಂಸ್ಥೆಯ ಹಿರಿಮೆಯನ್ನು ಹೆಚ್ಚಿಸಿರುತ್ತಾರೆ.
ವಿಧಾತ್ರಿ ಅಕಾಡೆಮಿಯು ಕಳೆದ ನಾಲ್ಕು ವರ್ಷಗಳಿಂದ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಅನುಭವಿ ಉಪನ್ಯಾಸಕರುಗಳಿಂದ ವಿದ್ಯಾರ್ಥಿಗಳಿಗೆ ಪಿಯುಸಿ ಪಠ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರವಾಗಿ ತರಬೇತಿಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವರ್ಷದಲ್ಲಿ ಕು. ಶ್ರೀಕೃಷ್ಣ, ಕು. ತಿಲಕ, ಕು. ವೈಭವ, ಕು. ಸ್ವಾತಿ, ಕು. ವಿಭಾ, ಕು. ಪ್ರಥಮ, ಕು. ಸಿಂಚನಾ, ಕು. ಸಂಜನಾ, ಕು. ದರ್ಶನ, ಕು. ಸಾಯಿಪ್ರಸಾದ, ಕು. ರೂಪಾ, ಕು. ಒವೈಸ, ಕು. ಸುಜನ, ಕು. ಪ್ರತ್ವಿರಾಜ ಹಾಗೂ ಇನ್ನಿತರ ವಿದ್ಯಾರ್ಥಿಗಳು ಜನವರಿ 2024 ರಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಎನ್.ಐ.ಟಿ. ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಪದವಿಯ ಪ್ರವೇಶಕ್ಕೆ ಅರ್ಹತೆ ಗಳಿಸುವುದರೊಂದಿಗೆ ಜೆಇಇ (ಅಡ್ವಾನ್ಸ್) ಪರೀಕ್ಷೆಗೆ ಆಯ್ಕೆಗೊಂಡು ಸಂಸ್ಥೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ.
ಕೊಂಕಣ ಎಜುಕೇಶನ್ ಟ್ರಸ್ಟನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷವನ್ನು ವ್ಯಕ್ತಪಡಿಸಿ ಶುಭ ಹಾರೈಸಿರುತ್ತಾರೆ.