ಭಟ್ಕಳ : ಬೆಳಕೆಯ ರಾಷ್ಟೀಯ ಹೆದ್ದಾರಿ 66ರಲ್ಲಿ ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಬಂಧಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಅಪಘಾತದಲ್ಲಿ ಓರ್ವ ಮೀನುಗಾರ ಮಹಿಳೆ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋ ಬೆಳಕೆ ಕಡೆಯಿಂದ ಭಟ್ಕಳದ ಕಡೆ ಚಲಿಸುತ್ತಿದ್ದು, ಇನ್ನೂ ಟಾಟಾ ಏಸ್ ಭಟ್ಕಳದಿಂದ ಶಿರೂರು ಕಡೆ ಚಲಿಸುತ್ತಿರುವುದಾಗಿ ಹೇಳಲಾಗಿದೆ. ಅಪಘಾತದಲ್ಲಿ ಆಟೋ ಚಾಲಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

RELATED ARTICLES  ಭೀಕರ ಅಪಘಾತ - ಜೀವನ್ಮರಣ ಸ್ಥಿತಿಯಲ್ಲಿ ಸವಾರರು.

ಗಾಯಗೊಂಡ ನಾಲ್ವರಲ್ಲಿ ಇಬ್ಬರನ್ನ ಮಣಿಪಾಲ ಹಾಗೂ ಇನ್ನಿಬ್ಬರನ್ನ ಕುಂದಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಭಟ್ಕಳದಲ್ಲಿ ಮತ್ತೆ ಹಾರಾಡಿದ ಹನುಮ ಧ್ವಜ : ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಸರಕಾರಕ್ಕೆ ಸೆಡ್ಡು