ಜೋಯಿಡಾ : ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಪಣಸೋಲಿ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದು ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಜೋಯಿಡಾ ತಾಲೂಕಿನ ಪಣಸೋಲಿ ಗ್ರಾಮದ ನಿವಾಸಿ ವಿಶ್ವನಾಥ ಪುರುಷೋತ್ತಮ ಆಚಾರಿ (30)ಎಂಬಾತನೇ ಮೃತಪಟ್ಟ ದುರ್ದೈವಿ. ಪಣಸೋಲಿಯಿಂದ ಸಫಾರಿಗೆ ಹೋಗುವ ರಸ್ತೆಯ ಪಕ್ಕ ಟ್ರ್ಯಾಕ್ಟರ್ ಉರುಳಿ ಬಿದ್ದು ಅದರಡಿ ಸಿಲುಕಿಕೊಂಡಿದ್ದ ಚಾಲಕ ವಿಶ್ವನಾಥ ಪುರುಷೋತ್ತಮ ಆಚಾರಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಇದೇ ಸಂದರ್ಭದಲ್ಲಿ ಇನ್ನೋರ್ವ ವ್ಯಕ್ತಿಗೆ ಗಾಯವಾಗಿದೆ.

RELATED ARTICLES  ಕರ್ತವ್ಯಕ್ಕೆ ತೆರಳುವ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

RELATED ARTICLES  'ಹಣತೆ’ ಬೆಳಕಿನಲ್ಲಿ ದೀಪಾವಳಿ ಕವಿಗೋಷ್ಠಿ ನ. 19 ಕ್ಕೆ.