ಕಾರವಾರ:ನಂದೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಕರವಸೂಲಿಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಂದೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕರವಸೂಲಿಗಾರ ಹುದ್ದೆಗೆ ಪಿಯುಸಿ ತೇರ್ಗಡೆಯೊಂದಿಗೆ ಗಣಕಯಂತ್ರದಲ್ಲಿ ಪರಿಣಿತಿ ಪಡೆದಿರಬೇಕು. ಹಾಗೂ ಜವಾನ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. 18 ರಿಂದ 35 ವರ್ಷ ವಯೊಮೀತಿಯೊಳಗಿರಬೇಕು.

RELATED ARTICLES  ಭಾರೀ ಮಳೆಯ ನಿರೀಕ್ಷೆ : ಹವಾಮಾನ ಇಲಾಖೆ ಮುನ್ಸೂಚನೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನವಾಗಿರುತ್ತದೆ. ಬಂದಂತಹ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ನಂದೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಸಾರ್ವಜನಿಕ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ.