ಕಾರವಾರ: ಪ್ರಸಕ್ತ ಸಾಲಿನ ಶೇ7.25ರಷ್ಟು ಎಸ್.ಎಫ್.ಸಿ ಅನುದಾನದಲ್ಲಿ ನಗರಾಭಿವೃದ್ಧಿ ಇಲಾಖೆ ಮಾರ್ಗಸೂಚಿಯಂತೆ ಬಡತನ ರೇಖೆಗಿಂತ ಕೆಳಗಿರುವ ಎಂಜಿನಿಯರಿಂಗ್/ ಎಮ್.ಬಿ.ಬಿ.ಎಸ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪಟಾಪ್ ಸೌಲಭ್ಯ ಪಡೆಯಲು ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಫಲಾನುಭವಿಗಳು ನಗರಸಭೆಯ ವ್ಯಾಪ್ತಿಯಲ್ಲಿರಬೇಕು. ವಾರ್ಷಿಕ ವರಮಾನ 2.50 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರಬಾರದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ/ ರಹವಾಸಿ ಪ್ರಮಾಣ ಪತ್ರ, ಅರ್ಜಿಯೊಂದಿಗೆ ಇತ್ತೀಚಿನ ಭಾವಚಿತ್ರ, ಬ್ಯಾಂಕ್ ಪಾಸ್ಟುಕ್ ಪ್ರತಿ, ಓದುತ್ತಿರುವ ಶಿಕ್ಷಣ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣಪತ್ರ, ಆಧಾರ ಕಾರ್ಡ್ ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 21 ರ ಸಂಜೆ 5 ಗಂಟೆಯೊಳಗೆ ನಗರಸಭೆ ಇವರಿಗೆ ಸಲ್ಲಿಸಬೇಕು. ಅಪೂರ್ಣ ಅರ್ಜಿಗಳನ್ನು ಮಂಜೂರಾತಿಗೆ ಪರಿಗಣಿಸುವುದಿಲ್ಲ ಮತ್ತು ಅವಧಿ ಮೀರಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ವಿಭಾಗದಿಂದ ಪಡೆಯಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  2021 ಅಗಸ್ಟ್ ಪ್ರಸ್ತುತ ನೇಮಕಾತಿ ಹಂತದಲ್ಲಿರುವ ಸರ್ಕಾರಿ‌ ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷೆ, ವಿದ್ಯಾರ್ಥಿ ವೇತನದ ಮಾಹಿತಿ.