Home Information ವಿದ್ಯಾಭ್ಯಾಸಕ್ಕಾಗಿ ಲ್ಯಾಪಟಾಪ್ ಸೌಲಭ್ಯ ಪಡೆಯಲು ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನ.

ವಿದ್ಯಾಭ್ಯಾಸಕ್ಕಾಗಿ ಲ್ಯಾಪಟಾಪ್ ಸೌಲಭ್ಯ ಪಡೆಯಲು ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನ.

ಕಾರವಾರ: ಪ್ರಸಕ್ತ ಸಾಲಿನ ಶೇ7.25ರಷ್ಟು ಎಸ್.ಎಫ್.ಸಿ ಅನುದಾನದಲ್ಲಿ ನಗರಾಭಿವೃದ್ಧಿ ಇಲಾಖೆ ಮಾರ್ಗಸೂಚಿಯಂತೆ ಬಡತನ ರೇಖೆಗಿಂತ ಕೆಳಗಿರುವ ಎಂಜಿನಿಯರಿಂಗ್/ ಎಮ್.ಬಿ.ಬಿ.ಎಸ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪಟಾಪ್ ಸೌಲಭ್ಯ ಪಡೆಯಲು ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಫಲಾನುಭವಿಗಳು ನಗರಸಭೆಯ ವ್ಯಾಪ್ತಿಯಲ್ಲಿರಬೇಕು. ವಾರ್ಷಿಕ ವರಮಾನ 2.50 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರಬಾರದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ/ ರಹವಾಸಿ ಪ್ರಮಾಣ ಪತ್ರ, ಅರ್ಜಿಯೊಂದಿಗೆ ಇತ್ತೀಚಿನ ಭಾವಚಿತ್ರ, ಬ್ಯಾಂಕ್ ಪಾಸ್ಟುಕ್ ಪ್ರತಿ, ಓದುತ್ತಿರುವ ಶಿಕ್ಷಣ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣಪತ್ರ, ಆಧಾರ ಕಾರ್ಡ್ ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 21 ರ ಸಂಜೆ 5 ಗಂಟೆಯೊಳಗೆ ನಗರಸಭೆ ಇವರಿಗೆ ಸಲ್ಲಿಸಬೇಕು. ಅಪೂರ್ಣ ಅರ್ಜಿಗಳನ್ನು ಮಂಜೂರಾತಿಗೆ ಪರಿಗಣಿಸುವುದಿಲ್ಲ ಮತ್ತು ಅವಧಿ ಮೀರಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ವಿಭಾಗದಿಂದ ಪಡೆಯಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.