ಕುಮಟಾ ಪೋಲಿಸ್ ಠಾಣೆಯಲ್ಲಿ ಎ.ಎಸ್.ಐ ಆಗಿದ್ದ ಶನವಾಜ್ ತಡಕೋಡ ಸೋಮವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಳಿಯಾಳ, ಅಂಕೋಲಾ, ದಾಂಡೇಲಿಯಲ್ಲಿ ಸೇವೆ ಸಲ್ಲಿಸಿದ್ದ ಇವರು, ಎ.ಎಸ್.ಐ ಆಗಿ ಪದೋನ್ನತಿಯ ಮೂಲಕ ಕುಮಟಾ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎರಡು ತಿಂಗಳಿನಲ್ಲಿ ಇವರು ಪೊಲೀಸ್ ವೃತ್ತಿಯಿಂದ ನಿವೃತ್ತಿ ಹೊಂದುವವರಿದ್ದರು. ಆದರೆ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ‌. ಮೃತರು ಪತ್ನಿ, ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ.

RELATED ARTICLES  ವಿಶ್ವ ಮಹಿಳಾ ದಿನಾಚರಣೆ : ಸ್ತ್ರೀ ಎಂದರೆ ಇಷ್ಟೇ ಸಾಕೇ?