ಲೋಕಸಭಾ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಮೊದಲ ಪಟ್ಟಿ ಫೆ.29 ರಂದು ಪ್ರಕಟಗೊಳ್ಳಲಿದೆ ಎಂದು ಅಂದಾಜಿಸಲಾಗಿದ್ದು, ರಾಜ್ಯದ 10ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದೆ. 10 ಕ್ಷೇತ್ರಗಳ ಪಟ್ಟಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವೂ ಸೇರಿದ್ದು ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಘೋಷಣೆಯಾಗಲಿದೆ ಎಂದು ಅಂದಾಜಿಸಲಾಗಿದೆ.

RELATED ARTICLES  ಏಕಾಗ್ರತೆ ಹೆಚ್ಚಲು ಹೀಗೆ ಮಾಡಿ.

ಲೋಕಸಭೆ’ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಅಧಮ್ಯ ವಿಶ್ವಾಸದಲ್ಲಿದ್ದು, ಇದೇ ತಿಂಗಳ 29ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಂದು ಪಕ್ಷವು ಸುಮಾರು 150ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಅಂದಾಜಿಸಲಾಗಿದೆ.

RELATED ARTICLES  ಶರಾವತಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಈರ್ವರು.

ಯಾತ್ಯಾರಿಗೆ ಟಿಕೇಟ್ ಸಾಧ್ಯತೆ?

ಶಿವಮೊಗ್ಗ-ಬಿ.ವೈ.ರಾಘವೇಂದ್ರ, ಮೈಸೂರು-ಕೊಡುಗು- ಪ್ರತಾಪ್ ಸಿಂಹ, ಚಿತ್ರದುರ್ಗ- ಎ.ನಾರಾಯಣಸ್ವಾಮಿ, ಡಾ.ಉಮೇಶ್ ಜಾಧವ್- ಕಲಬುರಗಿ, ಪ್ರಹ್ಲಾದ್ ಜೋಷಿ- ಧಾರವಾಡ, ಬಿ.ಶ್ರೀರಾಮುಲು -ಬಳ್ಳಾರಿ, ಅಮರೇಶ್ ನಾಯಕ್-ರಾಯಚೂರು, ಉತ್ತರಕನ್ನಡ-ಅನಂತಕುಮಾರ್ ಹೆಗಡೆ, ದಕ್ಷಿಣ ಕನ್ನಡ ನಳೀನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು- ಶೋಭಾ ಕರಂದ್ಲಾಜೆ, ಚಿಕ್ಕೋಡಿ-ಅಣ್ಣಾ ಸಾಹೇಬ್ ಜೊಲ್ಲೆಗೆ ಟಿಕೆಟ್ ಮೊದಲ ಪಟ್ಟಿಯಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ.