ಸೀಮೆ ಎಣ್ಣೆ ಕುಡಿದು ಅಸ್ವಸ್ಥರಾದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಾಲೂಕಿನ ಕುಳವೆ ಗ್ರಾಪಂ ವ್ಯಾಪ್ತಿಯ ಕಾಗೇರಿ ಗ್ರಾಮದ ಬರಗಾರದ ಮಂಜುನಾಥ ಗುರುರಾಜ ಶೇಟ್ (73) ಮೃತ ವ್ಯಕ್ತಿ. ಇವರು ಕಳೆದ 15 ವರ್ಷಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿ ಸರಿಯಾಗಿ ನಡೆದಾಡಲು, ಮಾತನಾಡಲು ಆಗುತ್ತಿರಲಿಲ್ಲ. ಫೆ. 28 ರಂದು ರಾತ್ರಿ 9.30 ಗಂಟೆ ಸುಮಾರಿಗೆ ಮನೆಯಲ್ಲಿ ಊಟ ಮಾಡುವಾಗ ನೀರು ಎಂದು ತಿಳಿದು ಬಾಟಲಿಯಲ್ಲಿದ್ದ ಸೀಮೆ ಎಣ್ಣೆಯನ್ನು ಕುಡಿದು ಅಸ್ವಸ್ಥರಾಗಿದ್ದರು. ಚಿಕಿತ್ಸೆಗಾಗಿ ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ಪರೀಕ್ಷಿಸಿದ ವೈದ್ಯರು, ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ವಿದ್ಯುತ್ ತಂತಿ ಸ್ಪರ್ಷದಿಂದ ಸಾವಿಗೀಡಾದ ಮೃತ ಮಂಗಕ್ಕೆ ಪೂಜೆ ಸಲ್ಲಿಸಿ ಅಂತ್ಯಸಂಸ್ಕಾರ.