ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರಕನ್ನಡ ಜಿಲ್ಲೆಗ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಿದರು.

RELATED ARTICLES  ಭೀಕರ ಸಿಡಿಲಿನಿಂದ ಪಾರಾದ ಮಗು - ಮಹಿಳೆ ಅಸ್ವಸ್ಥ.

ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ನಿಬಂಧಕರು ಉಪನಿಬಂಧಕರು, ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಪೋಲಿಸ್ ಅಧೀಕ್ಷಕರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES  ಅಂಗಡಿಯ ಮೇಲೆ ಕುಸಿದ ಗುಡ್ಡ : ಐವರು ಮಣ್ಣಿನಡಿಗೆ? ರಸ್ತೆ ಸಂಚಾರ ಬಂದ್..!