ಶಿರಸಿ : ಮಾಜಿ ಶಾಸಕ ವಿ.ಎಸ್. ಪಾಟೀಲ್ ಇದ್ದ ಕಾರು ಅಪಘಾತಕ್ಕೀಡಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಾರವಳ್ಳಿ‌‌ ಗ್ರಾಮದ ಬಳಿ ಅಪಘಾತ ನಡೆದಿದೆ.

ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಗ್ರಾಮ ಅಂದಲಗಿಗೆ ತೆರಳುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES  ಮತ್ತೆ ಸಿದ್ಧರಾಮಯ್ಯ ವಿರುದ್ಧ ಹರಿಹಾಯ್ದ ಸಂಸದ ಅನಂತಕುಮಾರ ಹೆಗಡೆ.

ಆದರೆ ಡಿಕ್ಕಿ ರಭಸಕ್ಕೆ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ವಿ.ಎಸ್. ಪಾಟೀಲರ ಎದೆಗೆ ಪೆಟ್ಟಾಗಿದೆ. ಯಲ್ಲಾಪುರ-ಮುಂಡಗೋಡ ಕ್ಷೇತ್ರದಲ್ಲಿ ಒಂದು‌ ಭಾರಿ‌ ಶಾಸಕರಾಗಿದ್ದ ವಿ.ಎಸ್. ಪಾಟೀಲ್ ಮೃದು ಹಾಗೂ ಸಜ್ಜನ ರಾಜಕಾರಿಣಿ ಎಂದೇ ಚಿರಪರಿಚಿತಾರಾಗಿದ್ದರು. ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

RELATED ARTICLES  ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗುವ ತನಕ ನಿರಂತರ ಹೋರಾಟ : ಅನಂತಮೂರ್ತಿ ಹೆಗಡೆ : ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಸರ್ಕಾರಕ್ಕೆ ಅನಂತಮೂರ್ತಿ ಎಚ್ಚರಿಕೆ.