ಕಾರವಾರ: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಮಿಕರ ಅರಿವು ಸಮಾಗಮ ಕಾರ್ಯಕ್ರಮವು ಮಾರ್ಚ್ 11 ರಂದು ಬೆಳಗ್ಗೆ 9 ಕಾರವಾರದ ಮಯೂರ ವರ್ಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಉದ್ಘಾಟಿಸುವರು. ಎಂ.ಸಿ.ಎ. ಲಿಮಿಟೆಡ್ ನ ಅಧ್ಯಕ್ಷ ಹಾಗೂ ಶಾಸಕ ಸತೀಶ ಸೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

RELATED ARTICLES  ರಸ್ತೆ ಬಂದ್ ಆದೇಶ ವಾಪಸ್ ಪಡೆದ ಜಿಲ್ಲಾಧಿಕಾರಿ.