ಕಾರವಾರ: ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಶಾಸಕ, ಮಾಜಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಒಲಿದಿದೆ. ಇದರೊಂದಿಗೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ನಡೆ ಈಗ ನಿಗೂಢವಾಗಿದೆ. ಅವರ ಬೆಂಬಲಿಗರು ಪಕ್ಷೇತರವಾಗಿ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರಸಿ ಕ್ಷೇತ್ರದಿಂದ ಮೂರು ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು, ಇನ್ನೂ ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ವಿರುದ್ಧ ಕಾಗೇರಿ ಅವರು ಸೋಲುವಂತಾಗಿತ್ತು.
ಅನಂತ ಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗಳು ಪಕ್ಷಕ್ಕೆ ದೊಡ್ಡ ಹೊಡೆತಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಇನ್ನು ಆಯ್ಕೆ ಆದ ನಂತರದಲ್ಲಿ ಇವರು ಜನರ ಕೈಗೆ ಸಿಗದೆ ದೂರವೆ ಉಳಿದುಕೊಳ್ಳುತ್ತಿದ್ದು, ಚುನಾವಣೆ ಹತ್ತಿರ ಇರುವಾಗ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು ಎಂಬ ಆರೋಪವೂ ಇದೆ. ಇನ್ನೂ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಎರಡರಿಂದ ಮೂರು ಶಾಸಕ ಸೋಲಿಗೆ ನೇರವಾಗಿ ಇವರೆ ಕಾರಣ ಎನ್ನುವುದು ಬಿಜೆಪಿ ನಾಯಕರ ಆರೋಪವೂ ಆಗಿತ್ತು.