ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿದ್ದ ಅನಂತಕುಮಾರ ಹೆಗಡೆ ಅವರನ್ನ ಕೈ ಬಿಟ್ಟು ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಉ.ಕ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಕೊನೆಗೂ ಮುಗಿದಿದ್ದು, ಕಾಗೇರಿ ಟಿಕೆಟ್ ಪಡೆದುಕೊಂಡಿದ್ದಾರೆ. ಕಳೆದ ಮೂರು ದಶಕಗಳ ಕಾಲ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತಕುಮಾರ ಹೆಗಡೆ ಸಂಸದರಾಗಿದ್ದವರು. ಅವರು ಏಳು ಬಾರಿ ಈ ಕ್ಷೇತ್ರವನ್ನ ಪ್ರತಿನಿಧಿಸಿ ಒಮ್ಮೆ ಮಾತ್ರ ಸೊತ್ತಿದ್ದರು. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ.
ಅನಂತಕುಮಾರ್ ಹೆಗಡೆ ಯಾರು ಬಂದು ಕುಳಿತುಕೊಳ್ಳುತ್ತಾರೆ ನೋಡೋಣ ಎಂದು ಹೇಳಿ, ಬಂದು ಕುಳಿತುಕೊಳ್ಳಿ ಎಂದು ಹೇಳುತ್ತಾ ಖುರ್ಚಿ ತೆಗೆದು ಟೇಬಲ್ ಮೇಲೆ ಇಟ್ಟ ವಿಡಿಯೋ ಹಾಗೂ ಕಾಗೇರಿಯವರು ದಾರಿ ಬಿಡಿ ಎಂದು ಹೇಳುತ್ತಿರುವ ವಿಡಿಯೋ ಹಾಕಿ ಜನರು ಟ್ರೋಲ್ ಮಾಡುತ್ತಿದ್ದಾರೆ.
ವೀಡಿಯೋ ಇಲ್ಲಿದೆ.