ಕುಮಟಾ : ಪ್ರಭಲ ಹಿಂದುತ್ವ ವಾದಿ ಹಾಗೂ ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿದ್ದ ಅನಂತಕುಮಾರ‌ ಹೆಗಡೆ ಬದಲಾಗಿ ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಿದ ನಂತರದಲ್ಲಿ ದಿನಕ್ಕೊಂದು ರಾಜಕೀಯ ವಿದ್ಯಮಾನಗಳು ಚುರುಕು ಪಡೆದುಕೊಳ್ಳುತ್ತಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಉ.ಕ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನದ ಹೊಗೆ ಎದ್ದಿದ್ದು, ಫೈಯರ್ ಬ್ರಾಂಡ್ ಅನಂತ ಕುಮಾರ ಹೆಗಡೆ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಅವರ ಕುರಿತಾಗಿ ಪ್ರಖರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

RELATED ARTICLES  18ನೇ ತಾರೀಖಿನ ಗುರುವಾರ ಶ್ರೀ ಶ್ರೀಧರ ಪದ್ಮಾವತಿ ದೇವಿಯ ಪಲ್ಲಕ್ಕಿ ಉತ್ಸವ

ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾವೇರಿ ಅನಂತ್ ಕುಮಾರ್ ಹೆಗಡೆಯವರನ್ನು ಭೇಟಿ ಮಾಡಲು ತೆರಳಿದರು ಅನಂತಕುಮಾರ್ ಹೆಗಡೆ ಭೇಟಿಯಾಗಿಲ್ಲ ಎಂದು ತಿಳಿದು ಬಂದಿದೆ. ಇದರ ಮಧ್ಯೆ ವಿಶೇಷ ರಾಜಕೀಯ ಬೆಳವಣಿಗೆಯೊಂದು ನಡೆದಿದ್ದು, ಅನಂತಕುಮಾರ್ ಹೆಗಡೆಯವರ ಪರಮಾಪ್ತ ಕೃಷ್ಣ ಎಸಳೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ.

ಕೃಷ್ಣ ಎಸಳೆ ಅನಂತಕುಮಾರ್ ಹೆಗಡೆಯವರ ಪರಮಾಪ್ತರಾಗಿದ್ದು, ಪ್ರಖರ ಹಿಂದುತ್ವವಾದಿಯಾಗಿಯೂ ಇವರು ಗುರುತಿಸಿಕೊಂಡವರು. ಅವರು ನಾಳೆ ಬೆಂಗಳೂರಿಗೆ ತೆರಳುವ ನಿರೀಕ್ಷೆಯಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡದಲ್ಲಿ ತಮ್ಮದೇ ಹಿಡಿತ ಹೊಂದಿರುವ ಅನಂತಕುಮಾರ ಹೆಗಡೆಯವರು ತಮ್ಮ ಪರಮಾಪ್ತನ ಜೊತೆಗೆ ಬೆಂಬಲವಾಗಿ ನಿಂತರೆ ಬಿಜೆಪಿ ಅಭ್ಯರ್ಥಿಗೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಗಳು ಹೆಚ್ಚಿದೆ. ಆದರೆ ಮುಂದಿನ ರಾಜಕೀಯ ಪ್ರಕ್ರಿಯೆಗಳು ಯಾವ ದಿಕ್ಕಿನಲ್ಲಿ ಸಾಗಲಿದೆ ಎನ್ನುವುದು ಮಾತ್ರ ಕುತೂಹಲ ಕೆರಳಿಸಿದೆ.

RELATED ARTICLES  ಶ್ರೀ ಚನ್ನಬಸಯ್ಯ ಸ್ವಾಮಿಗಳಿಗೆ ಸಂದಿತು ಗೋಕರ್ಣ ಗೌರವ