Home SIRSI ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು.

ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು.

ಶಿರಸಿ : ತಾಲೂಕಿನ ಕುಮಟಾ ರಸ್ತೆಯ ಹನುಮಂತಿ ಬಳಿ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಅಪಘಾತದ ತೀವ್ರತೆಗೆ ಕಾರ್ ಹಾಗೂ ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರ ಗುರುತು ತಿಳಿಯದ ಪರಿಸ್ಥಿತಿ ತಲುಪಿದ್ದಾರೆ. ಮೃತ ಸವಾರ ಕಲ್ಲಳ್ಳಿಯವರು ಎನ್ನಲಾಗಿದ್ದು ಕಾರಿನ ಪ್ರಯಾಣಿಕರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.